ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ನಡೆಸುತ್ತಿರುವ ಎನ್ ಕೌಂಟರ್ ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಗಸ್ತಿನಲ್ಲಿದ್ದ ಸೇನಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಕಂಡಿ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಯೋಧನನ್ನು ಕೂಡಲೇ ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿತ್ತು. ಇಂದು ಸಹ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ.