ನೀಟ್ ನಲ್ಲಿ ತಮಿಳು ಮಾಧ್ಯಮ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್; ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಎಸ್ಇ ಅರ್ಜಿ

ನೀಟ್ ಪರೀಕ್ಷೆಯಲ್ಲಿ ತಮಿಳು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಬಿಎಸ್ ಇ ಗುರುವಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ನೀಟ್ ಪರೀಕ್ಷೆಯಲ್ಲಿ ತಮಿಳು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಬಿಎಸ್ ಇ ಗುರುವಾರ ಹೇಳಿದೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮೂಲಗಳು ಮಾಹಿತಿ ನೀಡಿದ್ದು, ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಎಸ್ ಮೇಲ್ಮನವಿ ಅರ್ಜಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. 
ಕಳೆದ ಜುಲೈ 10ರಂದು ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (NEET)ಯನ್ನು ತಮಿಳು ಮಾಧ್ಯಮದಲ್ಲಿ ಬರೆದ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವಂತೆ ಸಿಬಿಎಸ್ ಇಗೆ ಮದ್ರಾಸ್ ಹೈಕೋರ್ಟ್ ಸೂಚಿಸಿತ್ತು. ಎಂಬಿಬಿಎಸ್ ಮತ್ತು ಬಿಡಿಎಸ್ ಪ್ರವೇಶ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ವ್ಯವಸ್ಥೆಯಲ್ಲಿ ವ್ಯತ್ಯಯಗೊಳ್ಳಲ್ಲಿದೆ. ಹೀಗಾಗಿ, ಎಂಬಿಬಿಎಸ್ ಪ್ರವೇಶ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ನ್ಯಾಯಾಲಯ ಆದೇಶಿಸಿತ್ತು. ಜತೆಗೆ ಹೊಸ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಸಿಬಿಎಸ್‌ಇಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿತ್ತು.
ಇದೀಗ ಮದ್ರಾಸ್ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಿಬಿಎಸ್ ಇ ಅರ್ಜಿ ಸಲ್ಲಿಕೆ ಮಾಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com