
ನವದೆಹಲಿ: ಆನ್ ಲೈನ್ ಅಂಕಿಅಂಶಗಳ ಮೇಲುಸ್ತುವಾರಿಗೆ ಸಾಮಾಜಿಕ ಮಾಧ್ಯಮ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಸದಾ ಕಣ್ಗಾವಲಿನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ಡಿ ವೈ ಚಂದ್ರಾಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ನೊಟೀಸ್ ಕಳುಹಿಸಿ ಎರಡು ವಾರಗಳೊಳಗೆ ಉತ್ತರಿಸುವಂತೆ ಹೇಳಿದೆ. ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಈ ವಿಷಯದಲ್ಲಿ ಸಹಕರಿಸುವಂತೆ ಕೋರ್ಟ್ ಹೇಳಿದೆ. ತೃಣಮೂಲ ಕಾಂಗ್ರೆಸ್ ಶಾಸಕ ಮಹುವಾ ಮೊಯ್ಟ್ರಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯದ ವಿಭಾಗೀಯ ಪೀಠ ಹೀಗೆ ಹೇಳಿದೆ.
ಕೇಂದ್ರ ಸರ್ಕಾರ ಜನರ ವಾಟ್ಸಾಪ್ ಮೆಸೇಜ್ ಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸಾಮಾಜಿಕ ಜಾಲತಾಣ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಕ್ರಮ ಸದಾ ಕಣ್ಗಾವಲಿನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೊಯ್ಟ್ರಾ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಎ ಎಂ ಸಿಂಘ್ವಿ, ಸರ್ಕಾರ ಪ್ರಸ್ತಾವನೆಗೆ ಮನವಿ ಮಾಡಿದ್ದು ಆಗಸ್ಟ್ 20ಕ್ಕೆ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ.
Advertisement