ಬಿಎಸ್ ಎಫ್ ಯೋಧನಿಂದ ಅತ್ಯಾಚಾರ: ಮಹಿಳೆ ಆತ್ಮಹತ್ಯೆ

ಗಡಿ ಭದ್ರತಾ ಪಡೆಯ ಯೋಧನೊಬ್ಬ ವಿವಾಹವಾಗುವುದಾಗಿ ಹೇಳಿ 26 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಮನನೊಂದು ವಿಷ ಸೇವಿಸಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ  ಗಡಿ ಭದ್ರತಾ ಪಡೆಯ ಯೋಧನೊಬ್ಬ ವಿವಾಹವಾಗುವುದಾಗಿ ಹೇಳಿ 26 ವರ್ಷದ  ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಮನನೊಂದು ವಿಷ ಸೇವಿಸಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

 ಜುಲೈ 6 ರಂದು ವಿಷಸೇವಿಸಿದ ಮಹಿಳೆ ನಿನ್ನೆ ದಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ಕೊಟ್ವಾಲಿ ಮುಖ್ಯಾ ಠಾಣಾಧಿಕಾರಿ ಅನಿಲ್ ಕಪೆರ್ ವಾನ್ ತಿಳಿಸಿದ್ದಾರೆ.

ಗಡಿ ಭದ್ರತಾ ಪಡೆಯ ಯೋಧ ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಇಂಟರ್ನೆಟ್ ನಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮೃತ ಯುವತಿಯ ತಂದೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಮದುವೆಯಾಗುವುದಾಗಿ ಹೇಳಿ ಆತ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಯುವತಿ ಮೇಲೆ ದೌರ್ಜನ್ಯವೆಸಗಿದ್ದಾನೆ .ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ ಎಂದು  ಮುಖ್ಯಾ ಠಾಣಾಧಿಕಾರಿ ಅನಿಲ್ ಕಪೆರ್ ವಾನ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com