ಬಿಹಾರ ರಾಜಕೀಯ ಪಕ್ಷಗಳು ವಿಶೇಷ ಸ್ಥಾನಮಾನದ ಪರವಾಗಿವೆ: ಸಿಎಂ ನಿತೀಶ್ ಕುಮಾರ್

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್....
ನಿತೀಶ್ ಕುಮಾರ್
ನಿತೀಶ್ ಕುಮಾರ್
Updated on
ಪಾಟ್ನಾ: ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಈ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ನನ್ನನ್ನು ಬೆಂಬಲಿಸಿವೆ ಎಂದು ಸೋಮವಾರ ಹೇಳಿದ್ದಾರೆ.
ಇಂದು 'ಲೋಕ ಸಂವಾದ್' ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬಿಹಾರ ಸಿಎಂ, ಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ನಾವು 2006ರಿಂದಲೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ. 14ನೇ ಹಣಕಾಸು ಆಯೋಗದ ವರದಿಯೂ ವಿಶೇಷ ಸ್ಥಾನಮಾನದ ಅವಶ್ಯಕತೆ ಇಲ್ಲ ಎಂದು ಸೂಚಿಸಿದೆ. ಹೀಗಾಗಿ ನಾವು 15ನೇ ಹಣಕಾಸು ಆಯೋಗದ ಮುಂದೆ ನಮ್ಮ ಬೇಡಿಕೆ ಇಡುತ್ತಿದ್ದೇವೆ ಎಂದಿದ್ದಾರೆ.
ವಿಶೇಷ ಸ್ಥಾನಮಾನದ ಬೇಡಿಕೆಗೆ ಬಿಹಾರದ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ವಿಶೇಷ ಸ್ಥಾನಮಾನ ಬೇಡಿಕೆಯಲ್ಲಿ ನಾವು ನಮ್ಮದೆ ತರ್ಕವನ್ನು ಹೊಂದಿದ್ದು, ನಮ್ಮ ಬೇಡಿಕೆ ಮುಂದುವರಿಸುತ್ತೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com