ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಮುಂದಾಗಿ: ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ

ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನ ಸಂದರ್ಭದಲ್ಲಿ ಕೈಗೆತ್ತಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಬಹು ದಿನಗಳಿಂದ ನನೆಗುದಿಗೆ ಬಿದ್ದಿರುವ ಮಹಿಳಾ  ಮೀಸಲಾತಿ ಮಸೂದೆಯನ್ನು ಮುಂಬರುವ ಸಂಸತ್  ಅಧಿವೇಶನ ಸಂದರ್ಭದಲ್ಲಿ ಕೈಗೆತ್ತಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.
 ಸಂಸತ್  ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ತಮ್ಮ ಬೆಂಬಲಕ್ಕಾಗಿ ಮನವಿ ಮಾಡುವುದಾಗಿ  ಪತ್ರದಲ್ಲಿ ಅವರು ಹೇಳಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷ ಸದನದಲ್ಲಿ ಬೆಂಬಲ ನೀಡಲಿದೆ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿಗೆ ಹೇಳಿದ್ದಾರೆ ಎಂದು  ಮೂಲಗಳಿಂದ ತಿಳಿದುಬಂದಿದೆ.
 ಪ್ರಧಾನಿ ನರೇಂದ್ರಮೋದಿ ಕಾಂಗ್ರೆಸ್ ಮುಸ್ಲಿಂರ ಪಕ್ಷ ಎಂಬ ವಿವಾದಾತ್ಮಾಕ ಹೇಳಿಕೆ ನೀಡಿದ ಬೆನ್ನಲ್ಲೇ  ರಾಹುಲ್ ಗಾಂಧಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಉತ್ತರಪ್ರದೇಶದ ಸಮಾವೇಶವೊಂದರಲ್ಲಿ  ಮೊನ್ನೆ ಮಾತನಾಡಿದ ನರೇಂದ್ರಮೋದಿ , ಕಾಂಗ್ರೆಸ್ ಪಕ್ಷ ಮುಸ್ಲಿಂರ ಪಕ್ಷ ಎಂದು ಆ ಪಕ್ಷದ ಅಧ್ಯಕ್ಷರೇ ಹೇಳಿಕೆ ನೀಡಿರುವುದನ್ನು ಪತ್ರಿಕೆಗಳಲ್ಲಿ ಓದಿರುವುದಾಗಿ ನರೇಂದ್ರಮೋದಿ ಹೇಳಿಕೆ ನೀಡಿದ್ದರು. 
ಆದರೆ, ಕಾಂಗ್ರೆಸ್  ಪಕ್ಷ ಮುಸ್ಲಿಂ ಸಮುದಾಯಕ್ಕೆ ಮಾತ್ರನಾ ಎಂದು ಕೇಳಲು ಬಯಸುವುದಾಗಿ ನರೇಂದ್ರಮೋದಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com