ದೆಹಲಿ: ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿಯ ಟೀಕೆಗೆ ಮಂಗಳವಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ನಾನು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಪರವಾಗಿರುತ್ತೇನೆ. ದುರ್ಬಲ, ತುಳಿತಕ್ಕೊಳಗಾದ, ನಿರ್ಲಕ್ಷಿತರ ಪರವಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.