ಭೋಪಾಲ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಲು ನಿಮ್ಮ ಪಕ್ಷ ಬೆಂಬಲ ನೀಡುತ್ತದೆಯೇ? ಎಂಬ ವರದಿಗಾರರ ಪ್ರಶ್ನೆಗೆ ನೇರವಾಗಿ ಉತ್ತರ ನೀಡಲು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನಿರಾಕರಿಸಿದ್ದಾರೆ.
ದೇಶದ ಜನತೆ ಕೇಂದ್ರದಲ್ಲಿ ಹೊಸ ಸರ್ಕಾರ ಮತ್ತು ಹೊಸ ಪ್ರಧಾನಿಯನ್ನು ಬಯಸುತ್ತಿದ್ದಾರೆ. 2019ರ ಲೋಕಸಭೆ ಚುನಾವಣೆ ನಂತರ ನೀವು ಹೊಸ ಪ್ರಧಾನಿಯನ್ನು ನೋಡಲಿದ್ದೀರಿ ಎಂದು ಅಖಿಲೇಶ್ ಯಾದವ್ ಅವರು ಹೇಳಿದ್ದಾರೆ.
ಒಂದು ವೇಳೆ ಮುಂದಿನ ವರ್ಷ ಲೋಕಸಭೆ ಚುನಾವಣೆ ನಂತರ ಬಿಜೆಪಯೇತರ ಸರ್ಕಾರ ರಚನೆಯಾದರೆ ರಾಹುಲ್ ಗಾಂಧಿ ಪ್ರಧಾನಿಯಾಗಲು ನಿಮ್ಮ ಪಕ್ಷದ ಬೆಂಬಲ ಇದೆಯೇ ಎಂಬ ಪ್ರಶ್ನೆಗೆ ಅಖಲೇಶ್ ಯಾದವ್ ಈ ರೀತಿ ಉತ್ತರ ನೀಡಿದ್ದಾರೆ.
ಇದೇ ವೇಳೆ ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.