ಛತ್ತೀಸ್ಗಢದಲ್ಲಿ ಭದ್ರತಾಪಡೆಗಳ ಎನ್'ಕೌಂಟರ್'ಗೆ 7 ನಕ್ಸಲರು ಬಲಿ

ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್'ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 7 ಮಂದಿ ನಕ್ಸಲರು ಮೃತಪಟ್ಟಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್'ಕೌಂಟರ್ನಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 7 ಮಂದಿ ನಕ್ಸಲರು ಮೃತಪಟ್ಟಿದ್ದಾರೆ. 
ಟಿಮಿನಾರ್ ಮತ್ತು ಪುಸನರ್ ಗ್ರಾಮಗಳಲ್ಲಿ ವಿಶೇಷ ಭದ್ರತಾ ಪಡೆ ಮತ್ತು ಜಿಲ್ಲಾ ಮೀಸಲು ಪಡೆಗಳು ನಡೆಸಿದ ಕಾರ್ಯಾಚರಣೆ ನಡೆಸುತ್ತಿತ್ತು. ಗಡಿ ಪ್ರದೇಶವಾದ ದಂತೇವಾಡ ಮತ್ತು ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ನಕ್ಸಲು ಕಾಣಿಸಿಕೊಂಡಿದ್ದಾರೆ. ಭದ್ರತಾಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಎನ್ ಕೌಂಟರ್ ನಡೆಸಿದ ಭದ್ರತಾ ಪಡೆಗಳು 7 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 
ಹತ್ಯೆಯಾದ ನಕ್ಸಲರಿಂದ ಭದ್ರತಾ ಪಡೆಗಳು 2 ಐಎನ್ಎಸ್ಎಎಸ್ ರೈಫಲ್ ಗಳು, ಎರಡು 303 ರೈಫಲ್ ಗಳು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಕ್ಸಲ್ ನಿಗ್ರಹ ಕಾರ್ಯಾಚರಣೆಯ ಡಿಐಜಿ ಪಿ.ಸುಂದರ್ ರಾಜ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com