ಅವಿಶ್ವಾಸ ನಿರ್ಣಯ: ಸರ್ಕಾರಕ್ಕೆ ಬೆಂಬಲ ನೀಡಿ- ಪಕ್ಷದ ಸಂಸದರಿಗೆ ವಿಪ್ ಜಾರಿ ಮಾಡಿದ ಶಿವಸೇನೆ

ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳಿರುವ ಶಿವಸೇನೆ, ಪಕ್ಷದ ಸಂಸದರಿಗೆ ವಿಪ್ ಜಾರಿ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ...
ಉದ್ಧವ್ ಠಾಕ್ರೆ, ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಉದ್ಧವ್ ಠಾಕ್ರೆ, ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Updated on: 
ನವದೆಹಲಿ; ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳಿರುವ ಶಿವಸೇನೆ, ಪಕ್ಷದ ಸಂಸದರಿಗೆ ವಿಪ್ ಜಾರಿ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ನಾಳೆ ಚರ್ಚೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶಿವಸೇನೆ ಮುಖ್ಯಸ್ಥ ಉದ್ಧವಾ ಠಾಕ್ರೆಯವರೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿದ್ದರು ಎಂದು ಹೇಳಲಾಗುತ್ತಿತ್ತು. 
ಇದರ ಬೆನ್ನಲ್ಲೇ ಇದೀಗ ಶಿವಸೇನೆ ಕೇಂದ್ರದ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಪಕ್ಷದ ಸಂಸದರೂ ಕೂಡ ಕೇಂದ್ರಕ್ಕೆ ಬೆಂಬಲ ನೀಡುವಂತೆ ಸೂಚಿಸಿದೆ. ಅಲ್ಲದೆ, ಕೇಂದ್ರಕ್ಕೆ ಬೆಂಬಲ ನೀಡುವಂತೆ ಮೂರು ಸಾಲಿನ ವಿಪ್'ನ್ನು ಪಕ್ಷದ ಸಂಸದರಿಗೆ ಜಾರಿಗೆ ಮಾಡಿದೆ ಎಂದು ತಿಳಿದುಬಂದಿದೆ. 
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ನಿನ್ನೆಯಷ್ಟೇ ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಂಗೀಕರಿಸಿದ್ದರು. ಅಲ್ಲದೆ, ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆಯನ್ನು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ನಡೆಸುವುದಾಗಿ ತಿಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com