ಅವಿಶ್ವಾಸ ನಿರ್ಣಯ: ಲೋಕಸಭೆಯಲ್ಲೂ ಪ್ರತಿಧ್ವನಿಸಿತು ಸಿಎಂ ಕುಮಾರಸ್ವಾಮಿ ಕಣ್ಣೀರು ವಿಚಾರ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ಸಂಸತ್ತಿನಲ್ಲಿ ವಾಕ್ಸಮರ: ಕುಮಾರಸ್ವಾಮಿ ಕಣ್ಣೀರು ಹಾಕಿದ್ದನ್ನು ಇಡೀ ದೇಶವೇ ನೋಡಿದೆ- ಲೋಕಸಭೆಯಲ್ಲಿ ಬಿಜೆಪಿ ಸಂಸದ
ಸಂಸತ್ತಿನಲ್ಲಿ ವಾಕ್ಸಮರ: ಕುಮಾರಸ್ವಾಮಿ ಕಣ್ಣೀರು ಹಾಕಿದ್ದನ್ನು ಇಡೀ ದೇಶವೇ ನೋಡಿದೆ- ಲೋಕಸಭೆಯಲ್ಲಿ ಬಿಜೆಪಿ ಸಂಸದ
ನವದೆಹಲಿ; ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದ್ದ ವಿಚಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿತು. 
ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಮಾತನಾಡಿದ ಟಿಡಿಪಿ ಸಂಸದ ಗಲ್ಲಾ ಜಯದೇವ್ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. 
ಮೋದಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯ ಎ1 ಮತ್ತು ಎ2 ಆರೋಪಿಯಾಗಿರುವ ಜನಾರ್ಧನ ರೆಡ್ಡಿ ಮೇಲಿರುವ ಪ್ರಕರಣಗಳನ್ನು ಕೈಬಿಟ್ಟಿದ್ದೀರಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಅವರ ಬೆಂಬಲಿಗರಿಗೆ ಟಿಕೆಟ್ ನೀಡಿದ್ದೀರಿ. ಯಾವ ಕಾರಣಕ್ಕೆ ಬೆಂಬಲ ನೀಡಿದ್ದಿರಿ ಎಂದು ಪ್ರಶ್ನೆ ಮಾಡಿದರು. 
ಈ ವೇಳೆ ಪ್ರತಿಕ್ರಿಯೆ ನೀಡಿದ ಮಧ್ಯಪ್ರದೇಶದ ಬಿಜೆಪಿ ಸಂಸದ ರಾಕೇಶ್ ಸಿಂಗ್ ಅವರು, ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕಣ್ಣೀರು ಹಾಕಿದ್ದನ್ನು ಇಡೀ ದೇಶವೇ ನೋಡಿದೆ. ಒಂದು ಕುಟುಂಬದ ಸರ್ಕಾರಕ್ಕೆ ಮಾತ್ರ ಕಾಂಗ್ರೆಸ್ ಬೆಂಬಲ ನೀಡಿದೆ. ಕಾಂಗ್ರೆಸ್ ಜೊತೆಗೂಡಿ ಇನ್ನೆಷ್ಟು ಪಕ್ಷಗಳು ವಿಷ ಕುಡಿಯಬೇಕು ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com