

ನವದೆಹಲಿ: ತೆಲುಗು ದೇಶಂ ಲೋಕಸಭೆಯಲ್ಲಿ ಮಂಡಿಸಿರುವ ಅವಿಶ್ವಾಸ ನಿರ್ಣಯ ಗೊತ್ತುವಳಿ ಮೇಲಿನ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೊಕೇಶ್ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆಂಧ್ರಪ್ರದೇಶದ ಹಕ್ಕಿನ ಬೇಡಿಕೆಗಾಗಿ ಕೇಂದ್ರಸರ್ಕಾರದ ವಿರುದ್ಧ ಹೋರಾಟಕ್ಕೆ ರಾಜ್ಯದ ಎಲ್ಲಾ ಪ್ರಜೆಗಳು, ಪಕ್ಷದ ಕಾರ್ಯಕರ್ತರು ಬೆಂಬಲಿಸುವಂತೆ ಅವರು ಟ್ವಿಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರದಿಂದ ಕಡೆಗಣಿಸಲ್ಪಟ್ಟ ನ್ಯಾಯವನ್ನು ಟಿಡಿಪಿ ಕೊಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ.