ಕಾಶ್ಮೀರ: ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿವೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿವೆ. ಆದರೆ ದಾಳಿಯನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಬಂಮ್ ಜೂ ಪ್ರದೇಶದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದು, ದಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ದಾಳಿಯಲ್ಲಿ ಯೋಧರು ಗಾಯಗೊಂಡ ಬಗ್ಗೆ ಯಾವುದೇ ವರದಿಯಾಗಿಲ್ಲ. ಆದರೆ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com