ರಷ್ಯಾ ಹಾಗೂ ಉತ್ತರ ಕೊರಿಯಾದಲ್ಲಿ ವಿಷದ ಸೂಜಿಯನ್ನು ಚುಚ್ಚಲು ಇದೇ ರೀತಿಯಾಗಿ ಅಪ್ಪಿಕೊಳ್ಳುವ ತಂತ್ರಗಳನ್ನು ಬಳಸುತ್ತಾರೆ. ಹೀಗಾಗಿ ಅಪ್ಪಿಕೊಳ್ಳಲು ರಾಹುಲ್ ಗಾಂಧಿಯವರಿಗೆ ಮೋದಿ ಅವಕಾಶ ನೀಡಬಾರದಿತ್ತು ಎಂದು ತಿಳಿಸಿದ್ದಾರೆ.
ಇದಲ್ಲದೆ, ಸುನಂದಾ ಪುಷ್ಕರ್ ಸಾವು ಪ್ರಕರಣವನ್ನು ಇದೇ ವೇಳೆ ಪ್ರಸ್ತಾಪಿಸಿರುವ ಸ್ವಾಮಿ, ಕಾಂಗ್ರೆಸ್ ಹಿರಿಯ ನಾಯಕ ಶಶಿತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ದೇಹದಲ್ಲಿಯೂ ಸಾಮಾನ್ಯರ ಕಣ್ಣಿಗೆ ಕಾಣದಂತಹ ಅತಿ ಸೂಕ್ಷ್ಮವಾದ ರಂಧ್ರವಿತ್ತು. ಇದೀಗ ರಾಹುಲ್ ಗಾಂಧಿಯವರು ಮೋದಿಯವರನ್ನು ಆಲಿಂಗನ ಮಾಡಿರುವುದಿಂದ ಕೂಡಲೇ ಮೋದಿಯವರು ತುರ್ತಾಹಿ ಹೋಗಿ ವೈದ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.