ಸಂಸತ್ ಗೆ ಸುಳ್ಳು ಮಾಹಿತಿ ಆರೋಪ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಹಕ್ಕು ಚ್ಯುತಿ ಮಂಡನೆ?

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪಕ್ಷ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪಕ್ಷ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಹೇಳಿದೆ.
ಅವಿಶ್ವಾಸ ನಿರ್ಣಯದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ, ಜಿಎಸ್ ಟಿ, ಜಯ್ ಷಾ ಆಸ್ತಿ ಸೇರಿದಂತೆ ಸಾಕಷ್ಟು ವಿಚಾರಗಳ ಕುರಿತು ಮಾತನಾಡಿದ್ದರು. ಈ ಎಲ್ಲ ಅಂಶಗಳನ್ನೂ ತಳ್ಳಿ ಹಾಕಿರುವ ಬಿಜೆಪಿ ರಾಹುಲ್ ಗಾಂಧಿ ದೇಶಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದೆ. ಅಲ್ಲದೆ ಸುಳ್ಳು ಆರೋಪಗಳ ಮೂಲಕ ಸರ್ಕಾರದ ಘನತೆಗೆ ಧಕ್ಕೆ ತರಲು ಯತ್ನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಅಂತೆಯೇ ರಫೆಲ್ ಒಪ್ಪಂದ, ಜಿಎಸ್ ಟಿ ಕುರಿತು ರಾಹುಲ್ ಗಾಂಧಿ ಆಡಿರುವ ಮಾತುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿರುವ ಬಿಜೆಪಿ, ದೇಶಕ್ಕೆ ಸುಳ್ಳು ಮಾಹಿತಿ ನೀಡಿದ ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವಂತೆ ಸ್ಪೀಕರ್ ಅವರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com