ಕಾಂಗ್ರೆಸ್ 'ಬೇಲ್ ಗಾಡಿ' ಅದರ ಬಹುತೇಕ ನಾಯಕರು ಜಾಮೀನು ಪಡೆದು ಹೊರಗಿದ್ದಾರೆ: ಸ್ವಾಮಿ

ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಬೇಲ್ ಗಾಡಿ ಎಂದು ಹೇಳುವುದು ಸರಿಯಾಗಿಯೇ ಇದೆ ಎಂದು
ಸುಬ್ರಹ್ಮಣಿಯನ್ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ
Updated on: 
ನವದೆಹಲಿ: ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಬೇಲ್ ಗಾಡಿ ಎಂದು ಹೇಳುವುದು ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ. 
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಖಜಾಂಚಿ ಮೋತಿಲಾಲ್ ವೋಹ್ರಾ ಜಾಮೀನು ಪಡೆದು ಹೊರಗಿದ್ದಾರೆ. ಇನ್ನು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ ಚಿದಂಬರಂ, ಸುನಂದಾ ಪುಷ್ಕರ್ ಪ್ರಕರಣದಲ್ಲಿ ಶಶಿ ತರೂರ್ ನಿರೀಕ್ಷಣಾ ಜಾಮೀನು ಪಡೆದು ಹೊರಗಿದ್ದಾರೆ ಎಂದು ಸ್ವಾಮಿ ಲೇವಡಿ ಮಾಡಿದ್ದಾರೆ. 
ಚಿದಂಬರಂ ಅವರನ್ನು ಹಿಡಿಯುವುದಕ್ಕೆ ಸಾಧ್ಯವೇ ಇಲ್ಲ ಎನ್ನುತ್ತಿದ್ದರು. ಆದರೆ ನಾನು ಚಿದಂಬರಂ ವಿರುದ್ಧ ದೋಷಾರೋಪ ಮಾಡಿದೆ. ಇನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿಯೂ ಸಹ ನಾನು ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮೋತಿಲಾಲ್ ವೋಹ್ರಾ ಅವರನ್ನು ಜೈಲಿಗೆ ಕಳಿಸುತ್ತೇನೆ ಎಂದು ಸ್ವಾಮಿ ಹೇಳಿದ್ದಾರೆ. 
ಇದೇ ವೇಳೆ ರಾಹುಲ್ ಗಾಂಧಿ ಮೋದಿ ಅವರನ್ನು ಅಪ್ಪಿಕೊಂಡಿದ್ದರ ಬಗ್ಗೆಯೂ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ರಾಹುಲ್ ಗಾಂಧಿ ಅಪ್ಪುಗೆಯನ್ನು ಬಿಜಾಪುರದ ಸಾಮ್ರಾಜ್ಯದ ಅಫ್ಜಲ್ ಖಾನ್ ಛತ್ರಪತಿ ಶಿವಾಜಿಯನ್ನು ಅಪ್ಪಿಕೊಂಡಿದ್ದಕ್ಕೆ ಹೋಲಿಕೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com