ರಕ್ಷಣಾ ಸಚಿವರ ದ್ವಂದ್ವ ಹೇಳಿಕೆಯೇ ರಫೇಲ್ ಡೀಲ್ ಹಗರಣಕ್ಕೆ ಸಾಕ್ಷಿ: ರಾಹುಲ್ ಗಾಂಧಿ

ವಿವಾದಾತ್ಮಕ ರಫೇಲ್ ಡೀಲ್ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸುತ್ತಿದ್ದಾರೆ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ವಿವಾದಾತ್ಮಕ ರಫೇಲ್ ಡೀಲ್ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸುತ್ತಿದ್ದಾರೆ. 
ಕೇಂದ್ರ ಸರ್ಕಾರ ವಿರುದ್ಧದ ಅವಿಶ್ವಾಸ ನಿರ್ಣಯ ವೇಳೆ ಸಹ ರಾಹುಲ್ ಗಾಂಧಿ ಮೋದಿ ಸರ್ಕಾರವನ್ನು ಟೀಕಿಸಿದ್ದರು. ಅಲ್ಲದೆ ಫ್ರಾನ್ಸ್ ಸರ್ಕಾರ ಜತೆಗಿನ ರಫೇಲ್ ಯುದ್ಧ ವಿಮಾನದ ಬೆಲೆಯನ್ನು ತಿಳಿಸುವಂತೆ ಆಗ್ರಹಿಸಿದ್ದರು. ಇದಕ್ಕೆ ಪ್ರತಿಯಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಹ ತಿರುಗೇಟು ನೀಡಿದ್ದು ರಫೇಲ್ ಡೀಲ್ ನಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಹೇಳಿದ್ದರು. 
ರಫೇಲ್ ಡೀಲ್ ವಿವಾದಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವರು ದ್ವಂದ್ವ ಹೇಳಿಕೆ ನೀಡಿರುವುದು ರಫೇಲ್ ಡೀಲ್ ನಲ್ಲಿ ದೊಡ್ಡ ಮಟ್ಟಿನ ಅವ್ಯವಹಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ನಿರ್ಮಲಾ ಸೀತಾರಾಮನ್ ಅವರು ಮೊದಲಿಗೆ ಇದರಲ್ಲಿ ಯಾವುದೇ ರಹಸ್ಯವಿಲ್ಲ ಎಂದು ಹೇಳಿದ್ದು ಇದೀಗ ಇದು ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆ ಗೌಪ್ಯ ವಿಚಾರ ಎಂದು ಹೇಳಿರುವುದು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com