ಪಣಜಿ: ಗೋವಾದ ಪ್ರಸಿದ್ಧ ದೇವಾಲಯವಾಗಿರುವ ಮಂಗೇಶಿ ದೇವಾಲಯದ ಅರ್ಚಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.
ಅರ್ಚಕರು, ದೇವಾಲಯದ ಆವರಣದಲ್ಲಿ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಆದರೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮುಂದಿನ ವಿಚಾರಣೆ ನಡೆಯುವವರೆಗೂ (ಜು.25) ಅರ್ಚಕ ಧನಂಜಯ್ ಭಾವೆ ಅವರನ್ನು ಬಂಧಿಸುವಂತಿಲ್ಲ ಎಂದು ಪೊಲೀಸರಿಗೆ ಸೂಚನೆ ನೀಡಿದೆ.
ಇಬ್ಬರು ಮಹಿಳೆಯರ ಮೆಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೆಕ್ಶನ್ 354 ರ ಅಡಿಯಲ್ಲಿ ಭಾವೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.