ಮೋದಿಯನ್ನು ತಬ್ಬಿಕೊಂಡ ರಾಹುಲ್: ಪ್ರಧಾನಿಯವರು ವೈದ್ಯರ ಬಳಿ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು: ಸ್ವಾಮಿ

ಅವಿಶ್ವಾಸ ಗೊತ್ತುವಳಿ ಮಂಡನೆ ಚರ್ಚೆ ವೇಳೆ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ತಬ್ಬಿಕೊಂಡಿದ್ದನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ...
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Updated on: 
ನವದೆಹಲಿ: ಅವಿಶ್ವಾಸ ಗೊತ್ತುವಳಿ ಮಂಡನೆ ಚರ್ಚೆ ವೇಳೆ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ತಬ್ಬಿಕೊಂಡಿದ್ದನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಕೂಡಲೇ ಮೋದಿ ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎಂದು ಸ್ವಾಮಿ ಕುಹುಕವಾಡಿದ್ದಾರೆ.
ಪ್ರಧಾನಿ ಮೋದಿ ಅವರು ರಾಹುಲ್ ಗಾಂಧಿಗೆ ತಮ್ಮನ್ನು ಆಲಿಂಗಿಸಲು ಅವಕಾಶವನ್ನೇ ನೀಡಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. .  
ರಾಹುಲ್ ಗಾಂಧಿಯನ್ನು ಬುದ್ದು ಎಂದು ಕರೆದಿರುವ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ತಮ್ಮನ್ನು ಆಲಿಂಗಿಸಲು ರಾಹುಲ್ ಗೆ ಅವಕಾಶ ನೀಡಬಾರದಿತ್ತು ಎಂದು ಟ್ವೀಟ್ ಮಾಡಿದ್ದಾರೆ, ಇಂಥಹ ಘಟನೆಗಳು ಭವಿಷ್ಯದಲ್ಲಿ ಯಾವುದೇ ಕಾರಣಕ್ಕೂ ನಡೆಯಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com