ಬಿಜೆಪಿಯಿಂದ ತುಳಿತಕ್ಕೊಳಗಾದವರ ಪರ ಹೋರಾಡಲು ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ

ಭಾರತೀಯ ಜನತಾ ಪಕ್ಷದಿಂದ ತುಳಿತಕ್ಕೊಳಗಾದ ದಲಿತರು ಹಾಗೂ ಬಡವರ ಪರ ಹೋರಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ....
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ
Updated on: 
ನವದೆಹಲಿ: ಭಾರತೀಯ ಜನತಾ ಪಕ್ಷದಿಂದ ತುಳಿತಕ್ಕೊಳಗಾದ ದಲಿತರು ಹಾಗೂ ಬಡವರ ಪರ ಹೋರಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ರಾಹುಲ್ ಕಾಂಗ್ರೆಸ್  'ಭಾರತದ ಧ್ವನಿ' (ವಾಯ್ಸ್ ಆಫ್ ಇಂಡಿಯಾ) ದೇಶದ ವರ್ತಮಾನ ಹಾಗೂ ಭವಿಷ್ಯದ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅನುಭವ ಮತ್ತು ಸಾಮರ್ಥ್ಯವುಳ್ಳವರ ಒಂದು ಸಂಸ್ಥೆಯಾಗಿದ್ದು, ಭೂತ ಮತ್ತು ಭವಿಷ್ಯದ ನಡುವಿನ ಸೇತುವೆಯಾಗಿದೆ ಎಂದು ತಿಳಿಸಿದ್ದಾರೆ,
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 23 ಸದಸ್ಯರ  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿದ್ದು, ಚುನಾವಣಾ ತಯಾರಿ ಸಂಬಂಧ ಇಂದು ಮೊದಲ ಸಭೆ ನಡೆಸಿದರು. ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮುಂತಾದವರು ಭಾಗವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com