ಅಳ್ವಾರ್ ಸಾಮೂಹಿಕ ಹಲ್ಲೆ :ರಾಜಸ್ತಾನ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ, ಸುಪ್ರೀಂನಲ್ಲಿ ವಿಚಾರಣೆ

ತ್ತೀಚಿಗೆ ರಾಜಸ್ತಾನದ ಅಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನ ಸರ್ಕಾರದ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಆಗಸ್ಚ್ 28 ರಂದು ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.
ಅಳ್ವಾರ್ ಸಾಮೂಹಿಕ ಹಲ್ಲೆ
ಅಳ್ವಾರ್ ಸಾಮೂಹಿಕ ಹಲ್ಲೆ

ನವದೆಹಲಿ:ಇತ್ತೀಚಿಗೆ ರಾಜಸ್ತಾನದ ಅಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನ ಸರ್ಕಾರದ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಆಗಸ್ಚ್ 28 ರಂದು ನಡೆಸಲು ಸುಪ್ರೀಂಕೋರ್ಟ್  ಸಮ್ಮತಿಸಿದೆ.

ಈ  ವಿಚಾರಕ್ಕೆ ಸಂಬಂಧಿಸಿದಂತೆ  ಸುಪ್ರೀಂಕೋರ್ಟ್ ವಿಭಾಗೀಯ ಪೀಠದ ತೀರ್ಪಿನ ಹೊರತಾಗಿಯೂ  ಸಾಮೂಹಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ತೆಹ್ ಸೀನ್ ಪೂನಾವಾಲ ಮತ್ತು ತುಷಾರ್ ಗಾಂಧಿ  ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಮುಂದಿನ ತಿಂಗಳ 28 ರಂದು ಈ ಅರ್ಜಿ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ  ಹೇಳಿದ್ದಾರೆ.  ನ್ಯಾಯಾಧೀಶರಾದ ಎ.ಎಂ ಖನ್ವೀಲ್ ಕರ್,  ಡಿ. ವೈ. ಚಂದ್ರಚೂಡ್  ಅವರನ್ನೊಳಗೊಂಡ ಪೀಠದ ಮುಂದೆ ಈ ಪ್ರಕರಣದ ವಿಚಾರಣೆ ನಡೆಯಲಿದ್ದು,  ರಾಜಸ್ತಾನ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕೆಂಂದು ಪೂನಾವಾಲಾ ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್  ನೀಡುವ ನಿರ್ದೇಶದನ ತೀರ್ಪನ್ನು  ಲಿಖಿತ ರೂಪದಲ್ಲಿ ನೀಡುವಂತೆ   ಅರ್ಜಿದಾರರು  ಒತ್ತಾಯಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 28 ರಂದು  ಸುಪ್ರೀಂಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com