ಗಾಜಿಯಾಬಾದ್ ಕಟ್ಟಡ ಕುಸಿತ : ನಾಲ್ವರು ಶಂಕಿತರ ಪತ್ತೆ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಿನ್ನೆ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಪತ್ತೆ ಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಟ್ಟಡ ದುರಂತ
ಕಟ್ಟಡ ದುರಂತ

ಗಾಜಿಯಾಬಾದ್ : ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಿನ್ನೆ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಪತ್ತೆ ಹಚ್ಚಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಾಖಲೆಗಳ ಪ್ರಕಾರ ಕಟ್ಟಡ ನಿರ್ಮಿಸುತ್ತಿದ್ದ ಭೂಮಿ ಬಿಲ್ಡರ್ ಗೆ ಸೇರಿದ್ದು, ಈ ಸಂಬಂಧ ನಾಲ್ವರನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ವಶಕ್ಕೆ ಪಡೆಯುವ ಪ್ರಕ್ರಿಯೆ ಮುಂದುವರೆಯುತ್ತಿದೆ. ಅವರ ವಿರುದ್ಧ ಎಫ್ ಐಆರ್ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು  ಮೀರತ್ ಇನ್ಸ್ ಪೆಕ್ಟರ್ ಜನರಲ್  ರಾಮ್ ಕುಮಾರ್ ತಿಳಿಸಿದ್ದಾರೆ.

ಐದು ಅಂತಸ್ತಿನ ಕಟ್ಟಡ ಕುಸಿದಿದ್ದರಿಂದ ಒಬ್ಬರು ಮೃತಪಟ್ಟಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಕಟ್ಟಡ ಕುಸಿತ ಘಟನೆಗೆ  ಸಂಬಂಧಿಸಿದಂತೆ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಕೆ. ಸಿಂಗ್ ಹೇಳಿದ್ದಾರೆ.

ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.  ಇದರ ಜವಾಬ್ದಾರಿ ತೆಗೆದುಕೊಂಡಿರುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಘಟನೆಯಲ್ಲಿ ಏಳು ಮಂದಿಯನ್ನು ರಕ್ಷಿಸಲಾಗಿದೆ. ಒಬ್ಬರಿಗೆ ತೀವ್ರ ರೀತಿಯ ವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.  ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು  ವಿ. ಕೆ. ಸಿಂಗ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com