ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರ ಸೋದರ ಮಾವ ಸತ್ರಾಜ್ ಮದನಿ ಪಿಡಿಪಿ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಪಕ್ಷದ ಹಿತಾಸಕ್ತಿಯ ದೃಷ್ಟಿಯಿಂದ ಉಪಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಮಾಧ್ಯಮ ಗೋಷ್ಟಿಯಲ್ಲಿ ಸತ್ರಾಜ್ ಮದನಿ ಘೋಷಿಸಿದ್ದಾರೆ, ಈಗಾಗಲೇ ತಾವು ರಾಜಿನಾಮೆ ಪತ್ರವನ್ನು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರಿಗೆ ನೀಡಿರುವುದಾಗಿ ತಿಳಿಸಿದ್ದಾರೆ,
2014ರ ವಿಧಾನಸಭೆ ಚುನಾವಣೆಯಲ್ಲಿ ದೇವಸರ್ ಕ್ಷೇತ್ರದಿಂದ ಸ್ಪರ್ದಿಸಿದ್ದ ಮದನಿ ಚುನಾವಣೆಯಲ್ಲಿ ಸೋತಿದ್ದರು.