ಸ್ವಚ್ಛ ಭಾರತದಡಿಯಲ್ಲಿ 50 ಲಕ್ಷ ಮನೆಗಳಿಗೆ ಶೌಚಾಲಯ : ಕೇಂದ್ರಸರ್ಕಾರ
ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ನಗರ ಪ್ರದೇಶದಲ್ಲಿ 50 ಲಕ್ಷ ಮನೆಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಡಲಾಗಿದೆ , ಮತ್ತೊಂದು ಹಂತದಲ್ಲಿ 7.65 ಲಕ್ಷ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ನವದೆಹಲಿ: ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ನಗರ ಪ್ರದೇಶದಲ್ಲಿ 50 ಲಕ್ಷ ಮನೆಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಡಲಾಗಿದೆ , ಮತ್ತೊಂದು ಹಂತದಲ್ಲಿ 7.65 ಲಕ್ಷ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಲೋಕಸಭೆಯಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಅವರು, ಬಯಲು ಮುಕ್ತ ಶೌಚಾಲಯ ನಿರ್ಮಾಣ ಯೋಜನೆಯಡಿ 50 ಲಕ್ಷದ 04 ಸಾವಿರದ , 098 ವೈಯುಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಮತ್ತೊಂದು ಹಂತದಲ್ಲಿ 7 ಲಕ್ಷದ 62 ಸಾವಿರದ , 556 ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.