
ನವದೆಹಲಿ: ರಾಜಸ್ತಾನ ಆಳ್ವಾರ್ ಜಿಲ್ಲೆಯಲ್ಲಿ ಗೋವು ಕಳ್ಳನೆಂದು ಬಾವಿಸಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಸಾಮೂಹಿಕ ಹಲ್ಲೆ ಪ್ರಕರಣ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿಂದು ಪ್ರತಿಧ್ವನಿಸಿತ್ತು.
ಸರ್ಕಾರ ಸಾಮೂಹಿಕ ಹಲ್ಲೆಗೆ ಬೆಂಬಲಿಸುತ್ತಿದೆ. ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಲೋಕಸಭೆಯಲ್ಲಿ ಆರೋಪಿಸಿದವು.ಈ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಬೇಕೆಂದು ಆಗ್ರಹಿಸಿದವು.
ಈ ಸಂದರ್ಭ ಮಾತನಾಡಿದ ರಾಜನಾಥ್ ಸಿಂಗ್, ಸಾಮೂಹಿಕ ಹಲ್ಲೆ ಪ್ರಕರಣಗಳ ತನಿಖೆಗಾಗಿ ಉನ್ನತ ಮಟ್ಟದ ತಂಡವನ್ನು ರಚಿಸಲಾಗಿದೆ. ಒಂದು ವೇಳೆ ಅಗತ್ಯವಾದಲ್ಲೀ ಸಾಮೂಹಿಕ ಹಲ್ಲೆ ವಿರುದ್ಧದ ಕಾನೂನು ಜಾರಿಗೆ ಗಮನ ಹರಿಸಲಾಗುವುದು ಎಂದರು.
Advertisement