ನೀಟ್ ಅಭ್ಯರ್ಥಿಗಳ ಡಾಟಾ ಲೀಕ್: ಸಿಬಿಎಸ್ ಇಗೆ ಪತ್ರ ಬರೆದ ರಾಹುಲ್, ತನಿಖೆಗೆ ಒತ್ತಾಯ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬರೆದ ಹಲವು ಅಭ್ಯರ್ಥಿಗಳ ಮಾಹಿತಿ ಸೋರಿಕೆಯಾಗುತ್ತಿದೆ ಎಂಬ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 
ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬರೆದ ಹಲವು ಅಭ್ಯರ್ಥಿಗಳ ಮಾಹಿತಿ ಸೋರಿಕೆಯಾಗುತ್ತಿದೆ ಎಂಬ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಸಿಬಿಎಸ್ ಇಗೆ ಪತ್ರ ಬರೆದಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಇಂದು ಸಿಬಿಎಸ್ ಇ ಅದ್ಯಕ್ಷೆ ಅನಿತಾ ಕರ್ವಾಲ್ ಅವರಿಗೆ ಪತ್ರ ಬರೆದಿರುವ ರಾಹುಲ್ ಗಾಂಧಿ ಅವರು, ಭವಿಷ್ಯದಲ್ಲಿ ಇಂತಹ ಸೋರಿಕೆ ತಡೆಗಟ್ಟಲು ಹೆಚ್ಚುವರಿ ಭದ್ರತೆ ನೀಡಬೇಕೆಂದು ಕೇಳಿಕೊಂಡಿದ್ದಾರೆ.
ನೀಟ್ ಪರೀಕ್ಷೆ ಬರೆದ ಸುಮಾರು ಎರಡು ಲಕ್ಷ ಅಭ್ಯರ್ಥಿಗಳ ಮಾಹಿತಿ ಸೋರಿಕೆಯಾಗಿದ್ದು, ಅದನ್ನು ಹಣಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಇತ್ತೀಚಿಗೆ ಮಾಧ್ಯಮಗಳು ವರದಿ ಮಾಡಿರುವುದನ್ನು ರಾಹುಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಭ್ಯರ್ಥಿಗಳ ಹೆಸರು, ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ಸೇರಿದಂತೆ ಹಲವು ವೈಯಕ್ತಿಕ ಮಾಹಿತಿ ಸೋರಿಕೆಯಾಗಿದ್ದು, ಅದನ್ನು ಕೆಲವು ಆನ್ ಲೈನ್ ಪೋರ್ಟಲ್ ನಲ್ಲಿ ಹಣಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ದೇಶಾದ್ಯಂತ ಈ ಪ್ರಮಾಣದಲ್ಲಿ ಅಭ್ಯರ್ಥಿಗಳ ಮಾಹಿತಿ ಸೋರಿಕೆಯಾಗುತ್ತಿರುವುದನ್ನು  ನೋಡಿ ನನಗೆ ಆಘಾತವಾಯಿತು ಎಂದು ರಾಹುಲ್ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕೂಡಲೇ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com