

ನವದೆಹಲಿ: ಐಎನ್ ಎಕ್ಸ್ ಮಾಧ್ಯಮ ಹಗರಣದಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಆಗಸ್ಟ್ 1 ರವರೆಗೂ ಬಂಧಿಸದಂತೆ ಮಧ್ಯಂತರ ರಕ್ಷಣೆ ಒದಗಿಸಿ ದೆಹಲಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಕಳೆದ ವರ್ಷ ಜೂನ್ ತಿಂಗಳಲ್ಲಿ ಹೊರಡಿಸಿದ್ದ ಲೂಕ್ ಔಟ್ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ತೆಗೆದುಹಾಕಿತ್ತು.