ರಾಫೆಲ್ ಒಪ್ಪಂದ: ಪ್ರಧಾನಿ ನರೇಂದ್ರ ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡನೆ

ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ನಿಲುವಳಿ ಸೂಚನೆ ಮಂದಿಸಿದೆ.
ರಾಫೆಲ್ ಒಪ್ಪಂದ: ಪ್ರಧಾನಿ ನರೇಂದ್ರ ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡನೆ
ರಾಫೆಲ್ ಒಪ್ಪಂದ: ಪ್ರಧಾನಿ ನರೇಂದ್ರ ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ನಿಲುವಳಿ ಸೂಚನೆ ಮಂಡನೆ
ನವದೆಹಲಿ: ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್ ನಿಲುವಳಿ ಸೂಚನೆ ಮಂದಿಸಿದೆ. 
ರಾಫೆಲ್ ಜೆಟ್ ಒಪ್ಪಂದದಲ್ಲಿನ ವಿವಾದಾತ್ಮಕ ಬೆಲೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ  ಪ್ರಧಾನಿ ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಿದ್ದು, ವೀರಪ್ಪ ಮೋಯ್ಲಿ, ಕೆವಿ ಥಾಮಸ್, ಜ್ಯೋತಿರಾದಿತ್ಯ ಸಿಂಧಿಯಾ, ರಾಜೀವ್ ಸತವ್ ನಿಲುವಳಿ ಸೂಚನೆಯನ್ನು ಬೆಂಬಲಿಸಿದ್ದಾರೆ. 
ರಾಫೆಲ್ ಒಪ್ಪಂದದಲ್ಲಿ ಹಗರಣ ನಡೆದಿದೆ, ಖುದ್ದು ಪ್ರಧಾನಿಯೇ ಆಸಕ್ತಿ ವಹಿಸಿ ರಾಫೆಲ್ ಜೆಟ್ ದರವನ್ನು ಬದಲಾವಣೆ ಮಾಡಿದ್ದು ಯುಪಿಎ ಸರ್ಕಾರವಿದ್ದಾಗ ನಿಗದಿಪಡಿಸಲು ಉದ್ದೇಶಿಸಲಾಗಿದ್ದ ಮೊತ್ತಕ್ಕಿಂತ ಮೂರರಷ್ಟು ಹೆಚ್ಚು ಹಣ ಪಾವತಿ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com