ರಾಜ್ಯಸಭೆಯಲ್ಲಿ ದೇಶಭ್ರಷ್ಟ ಆರ್ಥಿಕ ಅಪರಾಧ ನಿಯಂತ್ರಣ ವಿಧೇಯಕ ಅಂಗೀಕಾರ

ಮದ್ಯದ ದೊರೆ ವಿಜಯ್ ಮಲ್ಯ ಹಾಗೂ ಉದ್ಯಮಿ ನೀರವ್ ಮೋದಿಯಂತಹ ದೊಡ್ಡ ಆರ್ಥಿಕ ಅಪರಾಧಿಗಳನ್ನು ಮಟ್ಟಹಾಕುವ ....
ವಿಜಯ್ ಮಲ್ಯ, ಮೆಹುಲ್ ಚೋಕ್ಸಿ, ನೀರವ್ ಮೋದಿ
ವಿಜಯ್ ಮಲ್ಯ, ಮೆಹುಲ್ ಚೋಕ್ಸಿ, ನೀರವ್ ಮೋದಿ
ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಹಾಗೂ ಉದ್ಯಮಿ ನೀರವ್ ಮೋದಿಯಂತಹ ದೊಡ್ಡ ಆರ್ಥಿಕ ಅಪರಾಧಿಗಳನ್ನು ಮಟ್ಟಹಾಕುವ ದೇಶಭ್ರಷ್ಟ ಆರ್ಥಿಕ ಅಪರಾಧ ನಿಯಂತ್ರಣ ವಿಧೇಯಕ 2018ಕ್ಕೆ ಬುಧವಾರ ರಾಜ್ಯಸಭೆ ಅಂಗೀಕಾರ ನೀಡಿದೆ.
ಜುಲೈ 19ರಂದು ಲೋಕಸಭೆಯಲ್ಲಿ ಪಾಸ್ ಆಗಿದ್ದ ದೇಶಭ್ರಷ್ಟ ಆರ್ಥಿಕ ಅಪರಾಧ ನಿಯಂತ್ರಣ ವಿಧೇಯಕವನ್ನು ಇಂದು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ಇತ್ತೀಚಿಗೆ ಆರ್ಥಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾಗಿ ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಸದ್ಯದ ಕಾನೂನಿಂದ ಅದನ್ನು ತಡೆಯಲು ಸಾಧ್ಯವಿಲ್ಲ. ಹೀಗಾಗಿ ಹೊಸ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ಹಣಕಾಸು ಸಚಿವ ಪಿಯೂಶ್ ಗೋಯಲ್ ಅವರು ಹೇಳಿದ್ದಾರೆ.
ಪ್ರಸ್ತುತ ಅಪರಾಧ ಕಾನೂನು ಆರ್ಥಿಕ ಅಪರಾಧಿಗಳ ಆಸ್ತಿ ಜಪ್ತಿ ಮಾಡಲು ಸಾಧ್ಯವಿಲ್ಲ. ಈ ವಿಧೇಯಕ ಆಸ್ತಿ ಮತ್ತು ಸಂಪತ್ತನ್ನು ಜಪ್ತಿ ಮಾಡುವ ಅಧಿಕಾರ ನೀಡುತ್ತದೆ ಎಂದಿದ್ದಾರೆ.
ಆರ್ಥಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾಗಿ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ನಿರಸನಗೊಳಿಸುವವರ ಯತ್ನಗಳನ್ನು ತಡೆದು ಅವರನ್ನು ಕಾನೂನು ಪ್ರಕಾರ ಶಿಕ್ಷಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಗೋಯಲ್ ಹೇಳಿದ್ದಾರೆ.
ಈ ಹೊಸ ಕಾನೂನಿನಡಿ ಜಾರಿ ನಿರ್ದೇಶನಾಲಯ ಆರ್ಥಿಕ ಅಪರಾಧಗಳ ತನಿಖೆ ನಡೆಸಲಿದ್ದು, ತನಿಖಾ ಸಂಸ್ಥೆಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com