ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಅವರಿಗೆ ಅವರ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಡಿಎಂಕೆ ಮೂಲಗಳ ಪ್ರಕಾರ ಕಳೆದೊಂದು ವಾರದಿಂದ ಕರುಣಾನಿಧಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕರುಣಾನಿಧಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಬಗೆಯ ಊಹಾಪೋಹಗಳು ಹರಿದಾಡುತ್ತಿದ್ದು, ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ನಿವಾಸಕ್ಕೆ ಡಿಎಂಕೆ ಕಾರ್ಯಕರ್ತರು ಆತಂಕದಿಂದ ದೌಡಾಯಿಸುತ್ತಿದ್ದಾರೆ.