ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ, ವದಂತಿಗೆ ಕಿವಿಗೊಡಬೇಡಿ: ಸ್ಟಾಲಿನ್

ತೀವ್ರ ಜ್ವರದಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಜ್ವರ ಕಡಿಮೆಯಾಗಿದ್ದು...
ಕರುಣಾನಿಧಿ, ಸ್ಟಾಲಿನ್
ಕರುಣಾನಿಧಿ, ಸ್ಟಾಲಿನ್
Updated on: 
ಚೆನ್ನೈ: ತೀವ್ರ ಜ್ವರದಿಂದ ಬಳಲುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಜ್ವರ ಕಡಿಮೆಯಾಗಿದ್ದು ಅವರ ಆರೋಗ್ಯದಲ್ಲಿ ಚೇತರಿಗೆ ಕಂಡುಬಂದಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 
94 ವರ್ಷದ ಕರುಣಾನಿಧಿ ಅವರು ಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮನೆಯಲ್ಲೇ ಆಸ್ಪತ್ರೆ ಮಾದರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕರುಣಾನಿಧಿ ಅನಾರೋಗ್ಯದ ಕುರಿತು ಹಬ್ಬಿದ್ದ ಊಹಾಪೋಹಗಳಿಗೆ ತೆರೆ ಹೇಳಿದಿರುವ ಪುತ್ರ ಸ್ಟಾಲಿನ್ ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಹೇಳಿದ್ದಾರೆ. 
ಅನಾರೋಗ್ಯ ಕುರಿತಂತೆ ಹಬ್ಬಿದ್ದ ಊಹಾಪೋಹಗಳಿಂದಾಗಿ ಆತಂಕಕ್ಕೆ ಒಳಗಾಗಿದ್ದ ಡಿಎಂಕೆ ಕಾರ್ಯಕರ್ತರು  ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ನಿವಾಸಕ್ಕೆ ದೌಡಾಯಿಸಿದ್ದರು. 
ಅನಾರೋಗ್ಯಕ್ಕೀಡಾಗಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com