ಮೋದಿ ಸರ್ಕಾರ ಆಹಾರ ಭದ್ರತಾ ಕಾಯ್ದೆಯನ್ನು ಕ್ರೂರವಾಗಿ ಕಡೆಗಣಿಸಿದೆ: ಚಿದಂಬರಂ

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ಯುಪಿಎ ಸರ್ಕಾರಿ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ...
ಪಿ ಚಿದಂಬರಂ
ಪಿ ಚಿದಂಬರಂ
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ಯುಪಿಎ ಸರ್ಕಾರಿ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ಎಂಜಿಎನ್ಆರ್ ಇಜಿ ) ಯೋಜನೆಯನ್ನು ಕ್ರೂರವಾಗಿ ಕಡೆಗಣಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಶುಕ್ರವಾರ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಮೂವರು ಅಪ್ರಾಪ್ತ ಬಾಲಕಿಯರು ಹಸಿವಿನಂದ ಸಾಯಲು ಆಹಾರ ಭದ್ರತಾ ಕಾಯ್ದೆಯ ನಿರ್ಲಕ್ಷವೇ ಕಾರಣ ಎಂದು ಚಿದಂಬರಂ ದೂರಿದ್ದಾರೆ.
ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಮತ್ತು ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ನೀಡುವ ಉದ್ದೇಶದಿಂದ ಯುಪಿಎ ಸರ್ಕಾರ ಈ ಎರಡು ಕಾಯ್ದೆಗಳನ್ನು ಜಾರಿಗೆ ತಂದಿತ್ತು ಎಂದು ಅವರು ತಿಳಿಸಿದ್ದಾರೆ.
ಎಂಜಿಎನ್ಆರ್ ಇಜಿ ಮತ್ತು ಆಹಾರ ಭದ್ರತಾ ಕಾಯ್ದೆ ಹಸಿವು ಮುಕ್ತಗೊಳಿಸುವ ಉದ್ದೇಶದಿಂದ ಜಾರಿಗೆ ತರಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಆ ಎರಡು ಕಾಯ್ದೆಗಳನ್ನು ಕ್ರೂರವಾಗಿ ಕಡೆಗಣಿಸಿದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com