ಈ ಹಿನ್ನಲೆಯಲ್ಲಿ ಕರುಣಾನಿಧಿ ಅವರ ಆರೋಗ್ಯದ ಕುರಿತು ಅವರ ಪುತ್ರಿ ಕನ್ನಿಮೋಳಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಬೆಂಬಲಿಗರು ಮತ್ತು ಅಭಿಮಾನಿಗಳು ಆತಂಕಗೊಳ್ಳದಂತೆ ಕಿವಿಮಾತು ಹೇಳಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಕೇಂದ್ರ ಸಚಿವ ಎ ರಾಜಾ, ರಾಜ್ಯದ ಐದು ಬಾರಿ ಮುಖ್ಯಮಂತ್ರಿಗಳಾಗಿದ್ದ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಯಾವುದೇ ಅಪಾಯವಿಲ್ಲ. ಕಾರ್ಯಕರ್ತರು ಆತಂಕಗೊಳ್ಳಬಾರದು ಎಂದು ಹೇಳಿದ್ದಾರೆ.