ಎಂ.ಕರುಣಾನಿಧಿ
ದೇಶ
ಡಿಎಂಕೆ ನಾಯಕ ಎಂ.ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು: ಕಾವೇರಿ ಆಸ್ಪತ್ರೆಗೆ ದಾಖಲು
ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ(94) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಮಧ್ಯರಾತ್ರಿ ಸುಮಾರು 12:30 ರ ವೇಳೆಗೆ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ(94) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಮಧ್ಯರಾತ್ರಿ ಸುಮಾರು 12:30 ರ ವೇಳೆಗೆ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಶಾಸನಾಳಕ್ಕೆ ಅಳವಡಿಸಲಾಗಿದ್ದ ಟ್ಯೂಬ್ ಬದಲಾವಣೆಯ ನಂತರ ಕರುಣಾನಿಧಿಗೆ ತೀವ್ರ ಜ್ವರ ಉಂತಾಗಿ ಜು.26 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ಈ ಬಗ್ಗೆ ಪ್ರಕಟಣೆ ನೀಡಿದ್ದು, ಕರುಣಾನಿಧಿಯವರಿಗೆ ಶಾಸನಾಳ ಸೋಂಕಿನಿಂದ ಉಂಟಾಗಿರುವ ಜ್ವರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದು, ಆರೋಗ್ಯದಲ್ಲಿ ಸ್ವಲ್ಪ ಏರು ಪೇರುಂಟಾಗಿದೆ ಎಂದು ಮಾಹಿತಿ ನೀಡಿದೆ.
ರಾಜಕಾರಣಿಗಳು, ನಟರು ಕರುಣಾನಿಧಿಯವರ ಆರೋಗ್ಯ ವಿಚಾರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ