ಇದೇ ವೇಳೆ, ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಂದುಗೂಡಿಸುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಪ್ರಯತ್ನವನ್ನು ಶ್ಲಾಘಿಸಿದ ಒಮರ್ ಅಬ್ದುಲ್ಲಾ, ಪ್ರತಿಪಕ್ಷಗಳ ಮೈತ್ರಿಕೂಟದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಸೋನಿಯಾ ಗಾಂಧಿ ಅವರು ಪ್ರಾದೇಶಿಕ ಪಕ್ಷಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಪ್ರತಿಪಕ್ಷಗಳನ್ನು ಒಟ್ಟುಗೂಡಿಸಲು ಸೋನಿಯಾ ಸಾಕಷ್ಟು ಯತ್ನಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪ್ರತಿಪಕ್ಷಗಳು ಒಂದಾಗುವ ವಿಶ್ವಾಸವಿದೆ ಎಂದರು.