ಎಸ್ಪಿ ರಾಷ್ಟ್ರೀಯ ಕಾರ್ಯಕಾರಿಣಿ: ಲೋಕಸಭಾ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಖಿಲೇಶ್ ಗೆ ಅಧಿಕಾರ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಧಿಕಾರ ನೀಡಲಾಗಿದೆ ಎಂದು ಎಸ್ಪಿ ಮುಖಂಡ ರಾಮಗೋಪಾಲ್ ಯಾದವ್ ಹೇಳಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಖನೌ:  ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ   ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಧಿಕಾರ ನೀಡಲಾಗಿದೆ ಎಂದು  ಎಸ್ಪಿ ಮುಖಂಡ  ರಾಮಗೋಪಾಲ್ ಯಾದವ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಇವಿಎಂ ಬಳಸದೆ  ಬ್ಯಾಲೆಟ್ ಕಾಗದದ ಮೂಲಕ ನಡೆಸುವಂತೆಯೂ ಕಾರ್ಯಕಾರಿಣಿಯಲ್ಲಿ  ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.

ಮೊಹಮ್ಮದ್ ಅಜಾಮ್ ಖಾನ್ ಸೇರಿದಂತೆ ಮತ್ತಿತರ ನಾಯಕರು ಸಭೆಯಲ್ಲಿ ಗೈರಾದ ಬಗ್ಗೆ ಪ್ರತಿಕ್ರಿಯಿಸಿದ ರಾಮಗೋಪಾಲ್ ಯಾದವ್,  ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ  ಶೇ.90ರಷ್ಟು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಕಾಗದ ಪತ್ರದಲ್ಲಿ ಚುನಾವಣೆ ನಡೆಸಬೇಕೆಂಬ ತಮ್ಮ ಬೇಡಿಕೆಯನ್ನು ಒಂದು ವೇಳೆ ಚುನಾವಣಾ ಆಯೋಗ ತಿರಸ್ಕರಿಸಿದರೆ ಎಸ್ಪಿ ನಾಯಕರು ಚುನಾವಣಾ ಆಯೋಗದ ಬಾಗಿಲು ಮುಂದೆ ಕುಳಿತು ಸತ್ಯಾಗ್ರಹ ನಡೆಸುವುದಾಗಿ ರಾಮಗೋಪಾಲ್ ಯಾದವ್ ತಿಳಿಸಿದರು.

ಮಹಾಮೈತ್ರಿಯಲ್ಲಿ ಯಾರು ನಾಯಕತ್ವ ವಹಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಯಾದವ್, ಕೇಂದ್ರಸರ್ಕಾರ 17 ಪಕ್ಷಗಳೊಂದಿಗೆ ನಡೆಯುತ್ತಿದೆ. ಅವರ ನಾಯಕ ನರೇಂದ್ರಮೋದಿ ಮಾತ್ರ. ಅದೇ ರೀತಿಯಲ್ಲಿ ಎಲ್ಲಾ ಪಕ್ಷಗಲು ತಮ್ಮ ನಾಯಕರನ್ನು ಹೊಂದಿವೆ ಎಂದು ಅವರು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com