ಮರಾಠ ಮೀಸಲಾತಿ: ವಿಶೇಷ ಅಧಿವೇಶನ ಕರೆಯಲು ಮಹಾ ಸಿಎಂ ನಿರ್ಧಾರ

ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.16ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಮರಾಠ...
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್
ಮುಂಬೈ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.16ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಹಿಂಸಾತ್ಮಾಕ ಪ್ರತಿಭಟನೆಗೆ ಮಣಿದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಕಾನೂನು ಅಥವಾ ನಿರ್ಣಯ ಪಾಸ್ ಮಾಡಲು ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದೆ.
ಈ ಸಂಬಂಧ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ರಾಜ್ಯದಲ್ಲಿ ಪ್ರಭಾವಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಎಲ್ಲಾ ರಾಜಕೀಯ ಪಕ್ಷಗಳು ಒತ್ತಾಯಿಸಿರುವುದಾಗಿ ತಿಳಿಸಿದರು.
ಪ್ರತಿಭಟನಾಕಾರರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ ಮಹಾ ಸಿಎಂ, ಮರಾಠ ಸಮುದಾಯದ ಪ್ರತಿಭಟನಾಕಾರರ ವಿರುದ್ಧದ ಕೆಲ ಪ್ರಕರಣಗಳನ್ನು ಹಿಂಪಡೆಯುವುದಾಗಿ ತಿಳಿಸಿದರು. 
ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜ್ಯ ಹಿಂದೂಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದ ನಂತರ ಆ ಕುರಿತು ಚರ್ಚಿಸಲು ನಿರ್ಣಯ ಕೈಗೊಳ್ಳಲು ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಫಡ್ನವಿಸ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com