ಅಪಾಯದ ಮಟ್ಟ ಮೀರಿದ ಯಮುನಾ, ತುರ್ತು ಸಭೆ ಕರೆದ ದೆಹಲಿ ಸಿಎಂ

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟಮೀರಿ ...
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟಮೀರಿ ಹರಿಯುತ್ತಿರುವ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತುರ್ತು ಸಭೆ ಕರೆದಿದ್ದಾರೆ.
ಹರಿಯಾಣ ಸರ್ಕಾರ ಯಮುನಾ ನದಿಗೆ 5 ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದು, ಪರಿಸ್ಥಿತಿ ನಿಭಾಯಿಸುವ ಕುರಿತು ಚರ್ಚಿಸಲು ತುರ್ತು ಸಭೆ ಕರೆದಿರುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇನ್ನು ಹರಿಯಾಣ ಹರಿಬಿಟ್ಟಿರುವ ನೀರು ನಾಳೆ ವೇಳೆಗೆ ದೆಹಲಿ ತಲುಪಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಸ್ತಳಾಂತರ ಪ್ರಕ್ರಿಯೆ ಆರಂಭಿಸಲಾಗಿದೆ. ಜನ ಇದಕ್ಕೆ ಸಹಕರಿಸಬೇಕು ಮತ್ತು ಯಾವುದೇ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧವಾಗುವಂತೆ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.
ದೆಹಲಿ ಬಳಿ 205.20 ಮೀಟರ್‌ ಮಟ್ಟದಲ್ಲಿ ಯಮುನೆ ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಸರ್ಕಾರ ಅಪಾಯದ ಮುನ್ಸೂಚನೆ ನೀಡಿದೆ. ಇದೇ ಹಿನ್ನೆಲೆಯಲ್ಲಿ ಜನರ ಸ್ಥಳಾಂತರಗೊಳಿಸುವ ಕಾರ್ಯವನ್ನೂ ಆರಂಭಿಸಲಾಗಿದೆ. ಈ ವರೆಗೆ 10000 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.
ಉತ್ತರಾಖಂಡ, ಹಿಮಾಚಲ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಮತ್ತು ಹಾಥಿಕುಂಡ್​ ಬ್ಯಾರೇಜ್​ನಿಂದ ಅತ್ಯಧಿಕ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com