ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ 1,023 ವಿಶೇಷ ಕೋರ್ಟ್ ಅಗತ್ಯ: ಕೇಂದ್ರ

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ದೇಶಾದ್ಯಂತ 1000ಕ್ಕೂ ಹೆಚ್ಚು ತ್ವರಿತಗತಿಯ ವಿಶೇಷ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ದೇಶಾದ್ಯಂತ 1000ಕ್ಕೂ ಹೆಚ್ಚು ತ್ವರಿತಗತಿಯ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಂದಾಜಿಸಿದೆ. 
ಉತ್ತಮ ತನಿಖೆಗಾಗಿ ಮತ್ತು ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ ದೇಶಾದ್ಯಂತ ಉಚ್ಛ ನ್ಯಾಯಾಲಯಗಳ ಭಾಗವಾಗಿ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸಬೇಕಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ದೇಶಾದ್ಯಂತ 1000ಕ್ಕೂ ಹೆಚ್ಚು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಸರಿಸುಮಾರು 767.25 ಕೋಟಿ ರುಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಯೋಜನೆಗೆ ಕೇಂದ್ರ ಸರ್ಕಾರ 474 ಕೋಟಿ ರುಪಾಯಿಯನ್ನು ಮೀಸಲಿರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ. 
12 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಅನುಮತಿಸುವ ಆದೇಶವೊಂದರ ಭಾಗವಾಗಿ ಈ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com