ಐಆರ್'ಸಿಟಿಸಿ ಹಗರಣ: ಆರ್'ಜೆಡಿ ಮುಖ್ಯಸ್ಥ ಲಾಲೂ, ಪತ್ನಿ ರಾಬ್ರಿ, ಪುತ್ರ ತೇಜಸ್ವಿಗೆ ಸಮನ್ಸ್ ಜಾರಿ

ಭಾರತೀಯ ರೈಲ್ವೇ ಆಹಾರ ವಿತರಣೆ ಮತ್ತು ಪ್ರವಾಸೋದ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಪತ್ನಿ ರಾಬ್ರಿ ದೇವಿ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಭಾರತೀಯ ರೈಲ್ವೇ ಆಹಾರ ವಿತರಣೆ ಮತ್ತು ಪ್ರವಾಸೋದ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಪತ್ನಿ ರಾಬ್ರಿ ದೇವಿ ಪುತ್ರ ತೇಜಸ್ವಿ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. 
ವಿಶೇಷ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಲಾಲೂ ಪ್ರಸಾದ್ ಯಾದವ್, ರಾಬ್ರಿ ದೇವಿ ಹಾಗೂ ತೇಜಸ್ವಿ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಹಗರಣ ಪ್ರಕರಣ ಸಂಬಂಧ ಆಗಸ್ಟ್ 31ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ಕಳೆದ ಏಪ್ರಿಲ್ 16 ರಂದು ಸಿಬಿಐ ಅಧಇಕಾರಿಗಳು ಪ್ರಕರಣ ಸಂಬಂಧ ಚಾರ್ಚ್ ಶೀಟ್ ಸಲ್ಲಿಸಿದ್ದರು. ಚಾರ್ಜ್ ಶೀಟ್ ನಲ್ಲಿ ಹಗರಣದಲ್ಲಿ ರಾಬ್ರಿ ದೇವಿ ಹಾಗೂ ತೇಜಸ್ವಿ ಯಾವದ್ ಅವರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳಿರುವುದು ಕಂಡು ಬಂದಿದೆ. 
ಹಗರಣದಲ್ಲಿ ಯಾವದ್ ಹಾಗೂ ಅವರ ಕುಟುಂಬ ಸದಸ್ಯರಷ್ಟೇ ಅಲ್ಲದೆ, ಕೇಂದ್ರ ಮಾಜಿ ಸಚಿವ ಪ್ರೇಮ್ ಚಂದ್ ಗುಪ್ತಾ ಮತ್ತು ಅವರ ಪತ್ನಿ ಸರಳಾ ಗುಪ್ತಾ, ಐಆರ್ಸಿಟಿಸಿ ನಿರ್ವಾಹಕ ನಿರ್ದೇಶಕ ಬಿ.ಕೆ.ಅಗರ್ವಾಲ್, ಐಆರ್ಸಿಟಿಸಿ ನಿರ್ದೇಶಕ ರಾಕೇಶ್ ಸಕ್ಸೇನಾ ಅವರ ಹೆಸರೂ ಕೂಡ ಚಾರ್ಜ್ ಶೀಟ್ ನಲ್ಲಿದೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com