ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ನಿಯೋಜಿತ ಪ್ರಧಾನಿ ಹಾಗೂ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.