ಆ.30ರಿಂದ ಹೊಸ ನೋಂದಣಿ ಪ್ರಕ್ರಿಯೆ ಆರಂಭ: ಕೇಂದ್ರ ಗೃಹ ಸಚಿವಾಲಯ

ಆಗಸ್ಟ್ 30ರಿಂದ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ)ಯ ಪರಿಷ್ಕೃತ ಕರಡು ಪ್ರತಿಗೆ ಆಕ್ಷೇಪಣೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಆಗಸ್ಟ್ 30ರಿಂದ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ)ಯ ಪರಿಷ್ಕೃತ ಕರಡು ಪ್ರತಿಗೆ ಆಕ್ಷೇಪಣೆ ಸಲ್ಲಿಸಲು ಮತ್ತು ಹೊಸದಾಗಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಗತ್ಯಬಿದ್ದರೆ ಹೊಸ ನೋಂದಣಿ ಪ್ರಕ್ರಿಯೆಯನ್ನು ಮತ್ತೊಂದು ತಿಂಗಳ ಕಾಲ ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಬಹು ನಿರೀಕ್ಷಿತ ಎನ್ ಆರ್ ಸಿಯ ಪರಿಷ್ಕೃತ ಕರಡು ಇಂದು ಪ್ರಕಟವಾಗಿದ್ದು, ಅಸ್ಸಾಂನ 40 ಲಕ್ಷ ಮಂದಿ ಭಾರತೀಯ ಪ್ರಜೆಗಳೆಂದು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. 
ಎನ್ ಆರ್ ಸಿಯಲ್ಲಿ ಸ್ಥಾನ ಪಡೆಯದವರು ಈಗ ಆಗಸ್ಟ್ 30ರಿಂದ ಸೆಪ್ಟೆಂಬರ್ 30ರ ವರೆಗೆ ತಮ್ಮ ಹೆಸರು ಸೇರಿಸಲು ಹಾಗೂ ಈಗ ಪ್ರಕಟವಾಗಿರುವ ಕರಡುಪ್ರತಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಅಕ್ರಮ ವಿದೇಶಿ ವಲಸಿಗರನ್ನು ಗುರುತಿಸುವ ಉದ್ದೇಶದಿಂದ ಸುಪ್ರೀಂಕೋರ್ಟ್ ಆದೇಶದನ್ವಯ ಕಾನೂನುಬದ್ಧ ಅಸ್ಸಾಂ ನಾಗರಿಕರ ಪರಿಷ್ಕೃತ ರಿಜಿಸ್ಟರ್ ಕರಡನ್ನು ಎನ್ ಆರ್ ಸಿ ಬಿಡುಗಡೆ ಮಾಡಿದೆ.
ಎನ್ ಆರ್ ಸಿ ಪ್ರಕಾರ, ಅಸ್ಸಾಂನಲ್ಲಿ ಒಟ್ಟು 3,29, 91, 384 ಜನರು ರಾಷ್ಟ್ರೀಯ ಪೌರತ್ವ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 2,89,83,677 ಮಂದಿ ಕಾನೂನುಬದ್ಧ ಪ್ರಜೆಗಳಾಗಿದ್ದಾರೆ ಎಂದು ತಿಳಿಸಿದೆ. ಇದರಲ್ಲಿ 40 ಲಕ್ಷಕ್ಕೂ ಅಧಿಕ ಜನರು ಅಕ್ರಮ ವಲಸಿಗ ಪ್ರಜೆಗಳಾಗಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com