ರಾಂಚಿ : ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ

ದೆಹಲಿಯಲ್ಲಿ ಒಂದೇ ಕುಟುಂಬದ 11 ಮಂದಿ ನೇಣು ಬಿಗಿದುಕೊಂಡು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮೊದಲೇ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ರಾಂಚಿ: ದೆಹಲಿಯಲ್ಲಿ ಒಂದೇ ಕುಟುಂಬದ 11 ಮಂದಿ ನೇಣು ಬಿಗಿದುಕೊಂಡು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮೊದಲೇ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಒಂದೇ ಕುಟುಂಬದ 7 ಸದಸ್ಯರು ಸಾವಿಗೆ ಶರಣಾಗಿದ್ದಾರೆ.
ರಾಂಚಿಯ ಕಂಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.
ಇನ್ನು ಈ ತಿಂಗಳ ಮೊದಲ ವಾರದಲ್ಲಿ ಒಂದೇ ಕುಟುಂಬ ಆರು ಮಂದಿ ಸಾವಿಗೆ ಶರಣಾಗಿದ್ದರು, ಹಣಕಾಸಿನ ಮುಗ್ಗಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com