ಏರುತ್ತಿರುವ ತೈಲ ಬೆಲೆಗಳನ್ನು ಇಳಿಕೆ ಮಾಡುವುದಕ್ಕೆ ಸ್ಪಂದಿಸದೇ ಇರುವ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕೆ ಈ ರೀತಿಯ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿರುಪಮ್ ಹೇಳಿದ್ದಾರೆ. ಮುಂಬೈ ನಗರದಲ್ಲಿ ಸತತವಾಗಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದ್ದು, ಬಿಜೆಪಿ ಸಂವೇಧನಾಶೀಲತೆಯನ್ನೇ ಕಳೆದುಕೊಳ್ಳುವುದರಲ್ಲಿ ಹೊಸ ಮಟ್ಟವನ್ನು ತಲುಪಿದೆ, ಜನರು ಇದನ್ನು ಒಪ್ಪುವುದಿಲ್ಲ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ.