ಪ್ರಧಾನಿ ಮೋದಿ ಕ್ರಮಗಳಿಂದಾಗಿ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹವಾಗುವ ಹಂತದಲ್ಲಿದೆ: ಕೇಂದ್ರ ಸಚಿವ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಣಾಯಕ ಕ್ರಮಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಶನಿವಾರ ಹೇಳಿದ್ದಾರೆ...
ಕೇಂದ್ರ ಸಚಿವ ಜಿತೇಂದ್ರ ಸಿಂಗ್
ಕೇಂದ್ರ ಸಚಿವ ಜಿತೇಂದ್ರ ಸಿಂಗ್
Updated on
ಜಮ್ಮು; ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಣಾಯಕ ಕ್ರಮಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಶನಿವಾರ ಹೇಳಿದ್ದಾರೆ. 
ಮುಂದಿನ ವಾರ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಣಾಯಕ ಕ್ರಮಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಯ ಹಂತದಲ್ಲಿದೆ ಎಂದು ಹೇಳಿದ್ದಾರೆ. 
ಸರ್ಕಾರದ ನಿರ್ಣಾಯಕ ಕ್ರಮಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ 600ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ. ಯುಪಿಎ-1 ಮತ್ತು ಯುಪಿಎ-2 ಸರ್ಕಾರಗಳಿಗೆ ಹೋಲಿಕೆ ಮಾಡಿದರೆ, ಎನ್'ಡಿಎ ಸರ್ಕಾರದ ಆಡಳಿತಾವಧಿಯಲ್ಲಿಯೇ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದೆ. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕಡೆಯ ಹಂತದಲ್ಲಿದೆ ಎಂದು ತಿಳಿಸಿದ್ದಾರೆ. 
ಪಾಕಿಸ್ತಾನ ಹಾಗೂ ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸಿ ಉಗ್ರರ ವಿರುದ್ಧದ ಕಾರ್ಯಾಚರಣೆ ಹೀಗೆಯೇ ಮುಂದುವರೆಯುವುದೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ದೇಶದ ಹಿತಾಸಕ್ತಿಗನುಗುಣವಾಗಿ ಭಾರತ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದಿದ್ದಾರೆ. 
ಭಾರತ ತೆಗೆದುಕೊಳ್ಳುತ್ತಿರುವ ನಿರ್ಣಾಯಕ ಕ್ರಮಗಳಿಂದಾಗಿ ನೆರೆರಾಷ್ಟ್ರ ಇದೀಗ ಕುಗ್ಗುತ್ತಿದೆ. ಇದೀಗ ಗಡಿ ನುಸುಳುವಿಕೆ ಕುರಿತು ಸೇನೆ ಹಾಗೂ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಬೇಕಿದೆ. ಪಾಕಿಸ್ತಾನದ ಜೊತೆಗಿರುವ ಎಲ್ಲಾ ರೀತಿಯ ಸಂಸ್ಯೆಗಳನ್ನು ಸೇನೆ ಹಾಗೂ ರಾಜತಾಂತ್ರಿಕ ಹಂತದಲ್ಲಿಯೇ ಬಗೆಹರಿಸಲು ಸರ್ಕಾರ ಸಿದ್ಧವಿದೆ. ನೋಡು ನಿಷೇಧ ಹಾಗೂ ಜಿಎಸ್'ಟಿಯಂತಹ ದಿಟ್ಟ ನಿರ್ಧಾರಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆ. 
ಮಾತುಕತೆ ನಡೆಸಲು ಸಿದ್ಧರಿರುವವರಿಗೆ ಸ್ವಾಗತಿಸುತ್ತೇವೆ. ಪ್ರತ್ಯೇಕತಾವಾದಿಗಳಿಗೆ ಅಹ್ವಾನ ನೀಡುತ್ತೇವೆಂದು ಯಾರೂ ಹೇಳಿಲ್ಲ. ನನ್ನನ್ನು ಭೇಟಿಯಾಗಲು ಬರುವವರಿಗೆ ಸದಾ ಕಾಲ ಸ್ವಾಗತವಿದ್ದೇ ಇರುತ್ತದೆ. ನನ್ನನ್ನು ಭೇಟಿ ಮಾಡಲು ಬರವವರಿಗೆ ನಿರ್ಬಂಧಗಳನ್ನು ಹೇರಿಲ್ಲ. ಇದೇ ಮಾತನ್ನು ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರ ರಾಜ್ಯದತ್ತ ವಿಶೇಷ ಗಮನಹರಿಸಲು ಸರ್ಕಾರ ಬದ್ಧವಾಗಿದೆ. ಗಡಿ ಜನರ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com