ಸತತ ಐದನೇ ದಿನ ಪೆಟ್ರೋಲ್ ದರ ಇಳಿಕೆ, ಇಳಿಕೆ ಪ್ರಮಾಣ ಎಷ್ಟು ಗೊತ್ತಾ?

ಸತತ ಐದನೇ ದಿನವೂ ಪೆಟ್ರೋಲ್ ದರದಲ್ಲಿ ಇಳಿಕೆ ಕಂಡುಬಂದಿದ್ದು, ಡೀಸೆಲ್ ದರದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಸತತ ಐದನೇ ದಿನವೂ ಪೆಟ್ರೋಲ್ ದರದಲ್ಲಿ ಇಳಿಕೆ ಕಂಡುಬಂದಿದ್ದು, ಡೀಸೆಲ್ ದರದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ.

ಕಳೆದ ವಾರ ಗಗನಕ್ಕೇರಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಇದೀಗ ಇಳಿಕೆಯತ್ತ ಮುಖ ಮಾಡಿದೆಯಾದರೂ ಅಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗುತ್ತಿದೆ. ನಿನ್ನೆ ಪೆಟ್ರೋಲ್ ದರದಲ್ಲಿ 9 ಪೈಸೆ ಇಳಿಕೆಯಾಗಿತ್ತು. ಇಂದು ಮತ್ತೆ 9 ಪೈಸೆ ಇಳಿಕೆಯಾಗಿದ್ದು, ದೆಹಲಿಯಲ್ಲಿ 78.20 ರೂ ಇದ್ದ ಪೆಟ್ರೋಲ್ ದರ ಇದೀಗ 9 ಪೈಸೆ ಇಳಿಕೆಯೊಂದಿಗೆ 78.11 ರೂಗಳಾಗಿವೆ.

ಇನ್ನು ಡೀಸೆಲ್ ದರದಲ್ಲಿ ಯಾವುದೇ ರೀತಿಯ ಬದಲಾವಣೆಗಳಾಗಿಲ್ಲ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲದರದಲ್ಲಿ ಗಣನೀಯ ಇಳಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com