ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹತ್ಯೆಗಳಿಗೆ ಜಾಗವಿಲ್ಲ; ಕೇಂದ್ರ ಸಚಿವ ಜವಡೇಕರ್

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹತ್ಯೆಗಳಿಗೆ ಜಾಗವಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ...
ಕೇಂದ್ರ ಸಚಿವ ಪ್ರಕಾಶ್ ಜವಡೇಕರ್
ಕೇಂದ್ರ ಸಚಿವ ಪ್ರಕಾಶ್ ಜವಡೇಕರ್
Updated on
ಕೋಲ್ಕತಾ; ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹತ್ಯೆಗಳಿಗೆ ಜಾಗವಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ. 
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಅನುಮಾನಾಸ್ಪದ ಸಾವು ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದೊಂದು ರಾಜಕೀಯ ಹತ್ಯೆಯಾಗಿದೆ. ಈ ವರೆಗೂ 19 ಬಿಜೆಪಿ ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ. ಇದೀಗ ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಹತ್ಯೆ ಪ್ರಕರಣ ಅಮಾನವೀಯವಾದದ್ದು ಎಂದು ಹೇಳಿದ್ದಾರೆ. 
ಇಂತಹ ಕ್ರೂರ ರಾಜಕೀಯ ಹತ್ಯೆ ಮತ್ತು ಹತ್ಯೆ ಸಂಸ್ಕೃತಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಕ್ರೂರ ವರ್ತನೆಗಳಲ್ಲಿ ಭಾಗಿಯಾಗುವ ಜನರಿಗೆ ಪಶ್ಚಿಮ ಬಂಗಾಳ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹತ್ಯೆಗಳಿಗೆ ಜಾಗವಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com