ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಪರೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಪರೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಇಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ನೀಟ್ ಪರೀಕ್ಷೆಗಳ ಫಲಿತಾಂಶ ಘೋಷಿಸಿದೆ.
ಸಿಬಿಎಸ್ಇ ಅಧಿಕೃತ ಜಾಲತಾಣ cbseneet.nic.in ನಲ್ಲಿ ಫಲಿತಾಂಶಗಳನ್ನು ನೋಡಬಹುದಾಗಿದೆ.
ಈ ಬಾರಿಯ ನೀಟ್ ಪರಿಕ್ಷೆಯಲ್ಲಿ ಬಿಹಾರದ ಕಲ್ಪನಾ ಕುಮಾರಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಇವರು 720 ಅಂಕದಲ್ಲಿ 691 ಅಂಕ ಗಳಿಸಿದ್ದಾರೆ.ಭೌತಶಾಸ್ತ್ರದಲ್ಲಿ 171, ಸಾಯನಶಾಸ್ತ್ರದಲ್ಲಿ 160 ಹಾಗೂ ಜೀವಶಾಸ್ತ್ರದಲ್ಲಿ 360 ಅ?ಂಕ ಗಳಿಸಿದ್ದಾರೆ.
ಮೇ 6ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ) ಒಟ್ಟು 13,26,725 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.
ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದ ದೇಶದಾದ್ಯಂತ ಕಾಲೇಜುಗಳಲ್ಲಿ ಎಂಬಿಬಿಎಸ್ ಹಾಗು ಬಿಡಿಎಸ್ ಕೋರ್ಸುಗಳಿಗೆ ಪ್ರವೇಶಕ್ಕಾಗಿ  ನೀಟ್ ಪರೀಕ್ಷೆಯನ್ನು ಸಿಬಿಎಸ್ಇ  ಆಯೋಜಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com