230 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಟ್ಟಾರೆ ಒಟ್ಟು 60 ಲಕ್ಷ ನಕಲಿ ಮತದಾರರ ಹೆಸರನ್ನು ಸೇರಿಸಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು, ಕೂಡಲೇ ಈ ಹೆಸರುಗಳನ್ನು ತೆಗೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ನೇತೃತ್ವದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರ ಒಟ್ಟು 60 ಲಕ್ಷ ನಕಲಿ ಮತದಾರರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿದೆ ಎಂದು ಆರೋಪಿಸಿದ್ದಾರೆ. " ಆರೋಪಕ್ಕೆ ಸಂಬಂಧಿಸಿದ ದಾಖಲೆ, ಪುರಾವೆಗಳನ್ನು ನೀಡಿದ್ದೇವೆ 100 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮದೇ ಆದ ತನಿಖೆಯನ್ನು ನಡೆಸಿದ್ದೇವೆ ಎಂದು ಕಮಲ್ ನಾಥ್ ಹೇಳಿದ್ದಾರೆ.