ಮಿಜೋರಾಂನಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಸಾವು, 21 ಜನರಿಗೆ ಗಾಯ

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಮಿಜೋರಾಂನ ಲಂಗ್ಲೀ ಜಿಲ್ಲೆಯ ಪಂಗ್ಜ್ವಾಲ್ ಗ್ರಾಮದಲ್ಲಿ ಮಂಗಳವಾರ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಐಜ್ವಾಲ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಮಿಜೋರಾಂನ ಲಂಗ್ಲೀ ಜಿಲ್ಲೆಯ ಪಂಗ್ಜ್ವಾಲ್ ಗ್ರಾಮದಲ್ಲಿ ಮಂಗಳವಾರ ನಡೆದಿದೆ. 
ಅಪಘಾತಕ್ಕೀಡಾದ ಬಸ್ ಐಜ್ವಾಲ್ ನಿಂದ ಸಿಯಾಹ ಟೌನ್'ಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ನ.51ಕ್ಕೆ ತಲುಪಲು ಇನ್ನು 500 ಮೀಟರ್ ಇರುವಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಕದಂಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲಿಯೇ 9 ಮಂದಿ ದುರ್ಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಮೃತದೇಹಗಳನ್ನು ಹೊರೆತೆಗೆಯುತ್ತಿದ್ದಾರೆ. ಗಾಯಾಳುಗಳ ರಕ್ಷಣೆ ಕೂಡ ಒಂದೆಡೆ ಸಾಗುತ್ತಿದ್ದು, ಗಾಯಾಗಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಗಾಯಗೊಂಡಿರುವ 21 ಮಂದಿಯ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com